• Home  
  • ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ (79th Independence Day Celebration at SMVITM & Niraamaya Institute of Health Sciences)
- fastival

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ (79th Independence Day Celebration at SMVITM & Niraamaya Institute of Health Sciences)

Share: ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಡಾ. ರಾಧಕೃಷ್ಣ ಎಸ್ ಐತಾಳ್ ಧ್ವಜಾರೋಹಣ ನೆರವೇರಿಸಿದರು  (Bantakal)  ಬಂಟಕಲ್, 15 : ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಆರೋಗ್ಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.   ಶ್ರೀ ಸೋದೆ ವಾದಿರಾಜ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ. ರಾಧಕೃಷ್ಣ ಎಸ್ ಐತಾಳ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ […]

 (Bantakal)  ಬಂಟಕಲ್, 15 : ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಆರೋಗ್ಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

  ಶ್ರೀ ಸೋದೆ ವಾದಿರಾಜ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ. ರಾಧಕೃಷ್ಣ ಎಸ್ ಐತಾಳ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.   

  ನಿರಾಮಯ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ನವೀನ್ ಬಲ್ಲಾಳ್,    ಪ್ರಾಂಶುಪಾಲರಾದ ಶ್ರೀಮತಿ ರೋಶನಿ ರೊಡ್ರಿಗಸ್ , ಶಿವಶಂಕರ್ ಪೈ, ಇಂಜಿನಿಯರಿಂಗ್ ಕಾಲೇಜಿನ ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಮತ್ತು ಸಿಬ್ಬಂದಿಗಳಿಗೆ ದೇಶ ಭಕ್ತಿಗೀತೆ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನವನ್ನು ನೀಡಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.