ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಆಶುಭಾಷಣ ಸ್ಪರ್ಧೆ, ಕನ್ನಡ ಕವಿತೆ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರಗಿತು.
ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾಲೇಜಿನ ಶೈಕ್ಷಣಿಕ ಡೀನ್ ಡಾ. ನಾಗರಾಜ ಭಟ್ ಮತ್ತು ಡೀನ್ (ಆಂತರಿಕ ಗುಣಮಟ್ಟ) ಡಾ. ಸುದರ್ಶನ್ರಾವ್, ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

