ಬಂಟಕಲ್ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ
ಪ್ರಾಜೆಕ್ಟ್ ಮಾಹಿತಿ ಪಡೆದ ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್
(Udupi, Bantakal) ಉಡುಪಿ, ಬಂಟಕಲ್ : ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಕಾಲೇಜಿನ ಪಠ್ಯೇತರ ಘಟಕ, ಹವ್ಯಾಸಿ ಪ್ರಾಜೆಕ್ಟ್ ಕ್ಲಬ್, ಐಎಸ್‌ಟಿಇ ವಿದ್ಯಾರ್ಥಿ ಘಟಕ ಸಂಸ್ಥೆಯ ಇನ್ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ಆಯಾ ವಿಭಾಗಗಳಲ್ಲಿ ನಡೆಯಿತು.
ಮೆಕ್ಯಾನಿಕಲ್ ವಿಭಾಗದಿಂದ 7 ಪ್ರಾಜೆಕ್ಟ್ ಗಳು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಿಂದ 28 ಪ್ರಾಜೆಕ್ಟ್ ಗಳು, ಸಿವಿಲ್ ವಿಭಾಗದಿಂದ 2 ಪ್ರಾಜೆಕ್ಟ್ ಗಳು, ಕಂಪ್ಯೂಟರ್ ಸೈನ್ಸ್ ವಿಭಾಗದಿಂದ 49 ಪ್ರಾಜೆಕ್ಟ್ ಗಳು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಾಯನ್ಸ್ ವಿಭಾಗದಿಂದ 14 ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಶಿನ್ ಲರ್ನಿಂಗ್ 16 ಪ್ರಾಜೆಕ್ಟ್ ಗಳನ್ನು ವಿಭಾಗಗಳಲ್ಲಿ ಪ್ರದರ್ಶಿಸಲಾಯಿತು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನವೀಕರಿಸಬಹುದಾದ ಇಂಧನ, ಸೌರ ತಂತ್ರಜ್ಞಾನ, ನೀರು ಶುದ್ಧೀಕರಣ ಮತ್ತು ಕೃಷಿ ಯಾಂತ್ರೀಕರಣ ಕ್ಷೇತ್ರಗಳಲ್ಲಿ ತಮ್ಮ ಪ್ರಾಜೆಕ್ಟ್ ಗಳನ್ನು ಪ್ರದರ್ಶಿಸಿದರು.
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಡೀಪ್ ಲರ್ನಿಂಗ್, ಬ್ಲಾಕ್‌ಚೈನ್, ಫೆಡರೇಟೆಡ್ ಲರ್ನಿಂಗ್ ಕಂಪ್ಯೂಟರ್ ವಿಷನ್ ಹಾಗೂ ಮೆಷಿನ್ ಲರ್ನಿಂಗ್ ಆಧಾರಿತ ಪ್ರಾಜೆಕ್ಟ್ ಗಳನ್ನು ಪ್ರದರ್ಶಿಸಿದರು.
ಆರ್ಟಿಫೀಸಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳು ಕೃಷಿ, ಭದ್ರತೆ, ಸಾರಿಗೆ ಮತ್ತು ಪರಿಸರ ಮೇಲ್ವಿಚಾರಣೆ ಕ್ಷೇತ್ರಗಳ ಪ್ರಾಜೆಕ್ಟ್ ಗಳನ್ನು ಪ್ರದರ್ಶಿಸಿದರು.
ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳು ವಿ ಎಲ್‌ಎಸ್ ಐ ವಿನ್ಯಾಸ, ರೋಬೋಟಿಕ್ಸ್ ಕ್ಷೇತ್ರಗಳ ಪ್ರಾಜೆಕ್ಟ್ ಗಳನ್ನು ಪ್ರದರ್ಶಿಸಿದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಸ್ಥಿರ ನಿರ್ಮಾಣ ಸಾಮಗ್ರಿಗಳು ಹಾಗೂ ನೀರಿನ ಸಂರಕ್ಷಣೆಯ ಬಗ್ಗೆ ಪ್ರಾಜೆಕ್ಟ್ ಗಳನ್ನು ಪ್ರದರ್ಶಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್‌ಅವರು ಪ್ರಾಜೆಕ್ಟ್ ಪ್ರದರ್ಶನಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಅವರ ಪ್ರಾಜೆಕ್ಟ್ ಗಳ ಕುರಿತು ಚರ್ಚಿಸಿದರು.

