ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
ಧ್ವಜಾರೋಹಣ ಗೈದ ಕಾಲೇಜಿನ ಸಿಇಓ ಡಾ. ರಾಧಾಕೃಷ್ಣ ಎಸ್ ಐತಾಳ್
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಇನ್ಸಿಟ್ಯೂಟ್ ಆಫ್ ಹೆಲ್ತ್ ಸಾಯನ್ಸ್ ನ ಸಹಯೋಗದೊಂದಿಗೆ ಸೋಮವಾರ ಭಾರತದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ರವರು ಧ್ವಜಾರೋಹಣ ಗೈದರು.
ಅವರು ಮಾತನಾಡಿ, ರಾಷ್ಟ್ರೀಯ ಸಮಗ್ರತೆ ಮತ್ತು ಸಾಮಾಜಿಕ ಜವಾಬ್ದಾರಿಯ, ರಾಷ್ಟ್ರದ ಪ್ರಗತಿಗಾಗಿ ನೈತಿಕ ಮೌಲ್ಯಗಳು, ನಾಯಕತ್ವದ ಗುಣಗಳು ಮತ್ತು ಸೇವಾ- ಆಧಾರಿತ ಮನಸ್ಥಿತಿಯನ್ನು ಬೆಳೆಸಿಕೊಳ್ಳುವ ಮಹತ್ವದ ಬಗ್ಗೆ ತಿಳಿಸಿದರು.
ಕಾಲೇಜಿನ ಪ್ರಾಧ್ಯಾಪಕರಾದ ಬಾಲಚಂದ್ರ ಜೋಗಿ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ವಿಭಾಗ) ಇವರು ಮಾತನಾಡಿ, ಏಕತೆ, ಶಿಸ್ತು ಮತ್ತು ದೇಶಭಕ್ತಿಯ ಮೌಲ್ಯಗಳನ್ನು ತಿಳಿಸಿ, ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್, ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್ ನಿರಾಮಯ ಇನ್ಸಿಟ್ಯೂಟ್ ಆಫ್ ಹೆಲ್ತ್ ಸಾಯನ್ಸ್ ನ ನಿರ್ದೇಶಕ ಡಾ. ನವೀನ್ ಎಂ ಬಲ್ಲಾಳ್, ನಿರಾಮಯ ಕಾಲೇಜ್ ನ ಪ್ರಾಂಶುಪಾಲ ಬಿ ಶಿವಶಂಕರ್ ಪೈ, ಪ್ರಾಧ್ಯಾಪಕರು, ಎನ್ ಸಿ ಸಿ ಕೆಡೆಟ್ಗಳು ಉಪಸ್ಥಿತರಿದ್ದರು.

