• Home  
  • ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಭೂ ದಿನದ ಅಂಗವಾಗಿ ಜಾಗೃತಿ ಜಾಥಾ (AWARENESS RALLY BY SMVITM STUDENTS)
- ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಭೂ ದಿನದ ಅಂಗವಾಗಿ ಜಾಗೃತಿ ಜಾಥಾ (AWARENESS RALLY BY SMVITM STUDENTS)

Share:  ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಭೂ ದಿನದ ಅಂಗವಾಗಿ ಜಾಗೃತಿ ಜಾಥಾ ಜಾಥಕ್ಕೆ ಚಾಲನೆ ನೀಡಿದ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣಎಸ್ ಐತಾಳ್, ಪ್ರಾಂಶುಪಾಲ ಡಾ. ನಾಗರಾಜ್ ಭಟ್‌     (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಜಂಟಿಯಾಗಿ ವಿಶ್ವ ಭೂ ದಿನದ ಅಂಗವಾಗಿ ಭೂ ಸಂರಕ್ಷಣೆಯ ಕುರಿತು ಉಡುಪಿಯಲ್ಲಿ ಜಾಥವನ್ನು ಆಯೋಜಿಸಿತ್ತು.   ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ […]

 (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಜಂಟಿಯಾಗಿ ವಿಶ್ವ ಭೂ ದಿನದ ಅಂಗವಾಗಿ ಭೂ ಸಂರಕ್ಷಣೆಯ ಕುರಿತು ಉಡುಪಿಯಲ್ಲಿ ಜಾಥವನ್ನು ಆಯೋಜಿಸಿತ್ತು.

  ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣಎಸ್ ಐತಾಳ್ ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್‌ ಈ ಜಾಥಕ್ಕೆ ಚಾಲನೆ ನೀಡಿದರು.

 ಪ್ರಾಂಶುಪಾಲ ಡಾ. ನಾಗರಾಜ್ ಭಟ್‌ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿ, ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ, ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವುದು, ಮಾಲಿನ್ಯವನ್ನುಕಡಿಮೆ ಮಾಡುವುದು ಮತ್ತು ಪರಿಸರ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಬಗ್ಗೆ ತಿಳಿಸಿದರು.

  ಈ ಕಾರ್ಯಕ್ರಮದಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದ್ದರು.

  ಕಾರ್ಯಕ್ರಮದಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಸಚಿನ್ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ದೀಪಿಕಾ ಬಿ ವಿ, ಸಾಂಸ್ಕೃತಿಕ ಘಟಕದ ಸಂಯೋಜಕರಾದ ಶ್ರೀಮತಿ ಸವಿತಾ ಶೆಣೈ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.