ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ನಲ್ಲಿ ಚಿನ್ನದ ಪದಕ
ಮೈಸೂರಿನ ಚಾಮುಂಡಿ ವಿಹಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಪಂದ್ಯಾಟ
(Bantakal) ಬಂಟಕಲ್; ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಅಫ್ರಿದ್ ರವರು ಮೈಸೂರಿನ ಚಾಮುಂಡಿ ವಿಹಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ 6 ನೇ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ನಲ್ಲಿ ಅತ್ಯುತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಅವರು ಪಾಯಿಂಟ್ ಫೈಟ್ (89 ಕೆಜಿ) ವಿಭಾಗ ಹಾಗೂ ಎಂ/ಎಫ್ ವೆಪನ್ (ತಂಡ) ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.
ಅಲ್ಲದೆ ಎಂ/ಎಫ್ ವೆಪನ್ ಸೀನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದಿರುತ್ತಾರೆ.
ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕರು ವಿದ್ಯಾರ್ಥಿಯ ಸಾಧನೆಗೆ ಅಪಾರ ಸಂತೋಷ ವ್ಯಕ್ತಪಡಿಸಿದ್ದಾರೆ.

