• Home  
  • ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)
- ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

Share:   ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.     ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ […]

(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.

    ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

  ಸಮಾರಂಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಇಲ್ಲಿನ ಕುಲಸಚಿವರಾದ ಡಾ. ಪ್ರಸಾದ್ ಬಿ. ರಾಮ್‌ಪುರೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಿಯಮಿತವಾಗಿ ಕಾಲೇಜಿಗೆ ಹಾಜರಾಗುವಂತೆ ವಿಷಯಗಳನ್ನು ಅಂಕಗಳಿಗಾಗಿ ಕಲಿಯುವುದಕ್ಕಿಂತ ಅವುಗಳನ್ನು ಅರ್ಥಮಾಡಿಕೊಳ್ಳುವಂತೆ, ಶಿಸ್ತು ಮತ್ತು ತಂಡ ಮನೋಭಾವದ ಮೂಲಕ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸನ್ನು ಸಾಧಿಸುವಂತೆ ಸಲಹೆ ನೀಡಿದರು.

  ಪೋಷಕರು ತಮ್ಮ ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದೆ ಅವರಿಗೆ ಅಗತ್ಯವಾದ ಬೆಂಬಲ ಮತ್ತು ಪ್ರೋತ್ಸಾಹ ನೀಡುವಂತೆ  ತಿಳಿಸಿದರು. ಅಲ್ಲದೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಈ ವರ್ಷದಿಂದ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪರಿಚಯಿಸಿರುವ ಸ್ಕಿಲ್ ಲ್ಯಾಬ್ ಉಪಕ್ರಮದ ಕುರಿತು ವಿವರಿಸಿದರು.

 ಬೆಂಗಳೂರು ಟಿ ಸಿ ಎಸ್ ಗ್ಲೋಬಲ್ ಟೆಕ್ನಾಲಜೀಸ್‌ನ ಮುಖ್ಯಸ್ಥ ಪುರುಷೋತ್ತಮ ಎಸ್ ರವರು ಗೌರವ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಇಂಜಿನಿಯರಿಂಗ್ ಪಯಣ ಮತ್ತು ಉತ್ಪನ್ನ ಅಭಿವೃದ್ಧಿಯ ಅನುಭವವನ್ನು ಹಂಚಿಕೊಂಡು, ವಿಷಯಾಧಾರಿತ ಪರಿಣತಿ, ತಂಡ ಮನೋಭಾವದ ಹಾಗೂ ನಿರಂತರ ಕಲಿಕೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಹೊಂದಿ ಯಶಸ್ಸಿಗಾಗಿ ಶ್ರಮಿಸುವಂತೆ ಪ್ರೇರೇಪಿಸಿದರು.

  ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿ, ಪೋಷಕರು ಮತ್ತು ವಿದ್ಯಾರ್ಥಿಗಳು ಸಂಸ್ಥೆಯ ಮೇಲಿಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿ, ಗುಣಮಟ್ಟದ ಶಿಕ್ಷಣ ನೀಡಲು ಸಂಸ್ಥೆ ಬದ್ಧವಾಗಿದೆ ಎಂದು ಭರವಸೆ ನೀಡಿದರು.

  ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ಅವರು ಮಾತನಾಡಿ, ಸಂಸ್ಥೆಯ ಬೆಳವಣಿಗೆಯ ಬಗ್ಗೆ ವಿವರಿಸಿದರು ಮತ್ತು ಸಂಸ್ಥೆಯು ವಿದ್ಯಾರ್ಥಿಗಳ ಅಭಿವೃದ್ಧಿಗೆ ನಿರಂತರ ಬೆಂಬಲ ನೀಡುವ ಬಗ್ಗೆ  ಭರವಸೆ ನೀಡಿದರು.

ಶೈಕ್ಷಣಿಕ ವಿಭಾಗದ ಡೀನ್ ಡಾ. ಸುದರ್ಶನ್ ರಾವ್ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳು ಮತ್ತು ಶೈಕ್ಷಣಿಕ ಪಠ್ಯಕ್ರಮದ ಮಾರ್ಗಸೂಚಿಯ ಬಗ್ಗೆ ತಿಳಿಸಿದರು.

  ಈ ಸಂದರ್ಭದಲ್ಲಿ ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

 ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಸಚಿವರು ಹಾಗೂ ಎನ್‌ಐಟಿಕೆ  ಸುರತ್ಕಲ್‌ನ ಮಾಜಿ ನಿರ್ದೇಶಕರಾದ ಡಾ. ಎಚ್ ವಿ ಸುಧಾಕರ್ ನಾಯಕ್, ಸಂಸ್ಥೆಯ ಡೀನ್ (ಆರ್ & ಸಿ) ಡಾ. ಸಚಿನ್ ಭಟ್, ಪರೀಕ್ಷಾ ನಿಯಂತ್ರಕಿ ಡಾ. ಸೌಮ್ಯ ಜೆ ಭಟ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ದೀಪಿಕಾ ಬಿ ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಅನಂತ್ ಮೋಹನ್ ಮಲ್ಯ ಮತ್ತು ಶ್ರೀಮತಿ ರೇಶ್ಮಾ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಥಮ ವರ್ಷದ ಬಿ.ಇ. ಕೋರ್ಸ್‌ ನ ಸಂಯೋಜಕರಾದ ಡಾ. ಲೊಲಿಟ ಪ್ರಿಯ ಕ್ಯಾಸ್ತಲಿನೊ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.