ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ (Blood donation driave at Bantakal Shri Madhwa Vadiraja Institute)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳಿಂದ ಒಟ್ಟು 110 ಯುನಿಟ್ ರಕ್ತ ಸಂಗ್ರಹಣೆ
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ಹೆಚ್.ಡಿ.ಎಫ್. ಸಿ ಬ್ಯಾಂಕ್, ಉಡುಪಿ, ಭಾರತೀಯ ರೆಡ್ ಕ್ರಾಸ್ ಘಟಕದ ರಕ್ತ ನಿಧಿ ಕೇಂದ್ರ, ಕುಂದಾಪುರ, ರೆಡ್ ರಿಬ್ಬನ್ ಕ್ಲಬ್ ಉಡುಪಿ, ಕಾಲೇಜಿನ ಎನ್‌ಸಿಸಿ ಘಟಕ ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನ ಆವರಣದಲ್ಲಿರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಘಟಕದ ಜಯಕರ್ ಶೆಟ್ಟಿಯವರು ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಆರೋಗ್ಯವಂತ ವ್ಯಕ್ತಿಯು ಪ್ರತೀ ಮೂರು ತಿಂಗಳಿಗೆ ಒಂದು ಬಾರಿ ರಕ್ತದಾನ ಮಾಡಬಹುದೆಂದು ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು.
ಸಂಸ್ಥೆಯ ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ಅಧ್ಯಾಪಕರ, ಸಿಬ್ಬಂದಿಗಳ ಮತ್ತು ವಿದ್ಯಾರ್ಥಿಗಳ ನಿಸ್ವಾರ್ಥ ಸೇವಾ ಮನೋಭಾವವನ್ನು ಶ್ಲಾಘಿಸಿ, ರಕ್ತದಾನ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಉಡುಪಿ, ಕಾಲೇಜಿನ ಎನ್‌ಸಿಸಿ ಘಟಕವನ್ನು ಅಭಿನಂದಿಸಿದರು.
ಡೀನ್ ಡಾ. ನಾಗರಾಜ್ ಭಟ್, ಉದ್ಯೋಗ ಮತ್ತು ತರಬೇತಿ ಅಧಿಕಾರಿಗಳಾದ ಡಾ. ಮಂಜುನಾಥ್ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ರೋರ‍್ಯಾಕ್ಟ್ ಕ್ಲಬ್‌ನ ಸಂಯೋಜಕರಾದ ಸಚಿನ್ ಪ್ರಭು ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿಗಳು ಮತ್ತು ವಿಧ್ಯಾರ್ಥಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಂದ ಸೇರಿ ಒಟ್ಟು 110 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.