• Home  
  • ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Annual Sports Meet Held at SMVITM, Bantakal)
- ಕ್ರೀಡೆ - ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Annual Sports Meet Held at SMVITM, Bantakal)

Share: ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಪನ್ನ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಯೇಟಿವ್‌ಎಜುಕೇಶನ್ ಫೌಂಡೇಶನ್, ಮೂಡಬಿದ್ರೆ ಇಲ್ಲಿನ ಸಹ-ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿಯವರು    ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ದೈಹಿಕ ಸದೃಢತೆಗೆ ಮತ್ತು ಮಾನವನ ಜೀವನದಲ್ಲಿ ಮಾನಸಿಕ ಒತ್ತಡವನ್ನುಕಡಿಮೆ ಮಾಡಲು ಸಹಾಯಕವಾಗಿದೆ ಎಂದರು. ಈ ಸಂದರ್ಭದಲ್ಲಿಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್‌ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. […]

(Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಜರುಗಿತು.

ಕ್ರೀಯೇಟಿವ್‌ಎಜುಕೇಶನ್ ಫೌಂಡೇಶನ್, ಮೂಡಬಿದ್ರೆ ಇಲ್ಲಿನ ಸಹ-ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿಯವರು    ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ದೈಹಿಕ ಸದೃಢತೆಗೆ ಮತ್ತು ಮಾನವನ ಜೀವನದಲ್ಲಿ ಮಾನಸಿಕ ಒತ್ತಡವನ್ನುಕಡಿಮೆ ಮಾಡಲು ಸಹಾಯಕವಾಗಿದೆ ಎಂದರು.

ಈ ಸಂದರ್ಭದಲ್ಲಿಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್‌ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್‌ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಪೌಲ್ ಸೂರಜ್, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿರಾಮಯ ನರ್ಸಿಂಗ್ ಮತ್ತುಎಲೈಡ್ ಹೆಲ್ತ್ ಸಾಯನ್ಸ್‌  ವಿದ್ಯಾರ್ಥಿಗಳ ತಂಡವು ಪಥ ಸಂಚಲನದಲ್ಲಿ ಉತ್ತಮ ತಂಡ ಪ್ರಶಸ್ತಿ ಗಳಿಸಿತು.

ಕ್ರೀಡಾ ಕಾರ್ಯದರ್ಶಿ ಸಮೀಕ್ಷಾ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಅಭಿಷೇಕ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.