ಬಂಟಕಲ್ ತಾಂತ್ರಿಕ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳಿಂದ “ಫುಡ್ ಪೆಸ್ಟ್”
ಬಂಟಕಲ್; ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಎಂಬಿಎ ವಿದ್ಯಾರ್ಥಿಗಳಿಗೆ ಬೆಂಕಿಯಿಲ್ಲದೆ ಅಡುಗೆ ಎಂಬ ಶೀರ್ಷಿಕೆಯಡಿ “ಫುಡ್ ಪೆಸ್ಟ್”(Foodie Fiesta) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ “ಫುಡ್ ಪೆಸ್ಟ್” ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಪಾಕ ಪ್ರಾವಿಣ್ಯತೆ, ವ್ಯವಹಾರ ಕೌಶಲ್ಯ, ಉದ್ಯಮ ಶೀಲತೆ, ಮಾರುಕಟ್ಟೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವ್ಯವಹಾರದ ಬಗ್ಗೆ ತಿಳಿಸಿ ಕೊಡುವುದಾಗಿದೆ.
ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್(Dr. Thirumaleshwara Bhat, Principal)ಉದ್ಘಾಟಿಸಿದರು.
ಅವರು ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸುವಂತೆ ಮನವಿ ಮಾಡಿದರು.
“ಫುಡ್ ಪೆಸ್ಟ್”ನಲ್ಲಿ 4 ವಿದ್ಯಾರ್ಥಿಗಳಂತೆ ಒಟ್ಟು 5 ತಂಡಗಳು ಭಾಗವಹಿಸಿದೆ.
ವಿದ್ಯಾರ್ಥಿಗಳು ವಿವಿಧ ಬಗೆಯ ಸಿಹಿ ತಿಂಡಿಗಳು ಮತ್ತು ಪಾನೀಯಗಳನ್ನು ತಯಾರಿಸಿದ್ದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಸೂರಜ್ ಪ್ರಾನ್ಸಿಸ್ ನೊರೊನ್ಹಾ(Dr. Suraj Francis Noronha, Director MBA), ಡೀನ್ಗಳು, ವಿವಿಧ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

