ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿ ವೇದಾಂತ್ ಆಚಾರ್ಯರವರಿಗೆ ಕುಸ್ತಿಯಲ್ಲಿ ಚಿನ್ನದ ಪದಕ
ವಿದ್ಯಾರ್ಥಿಯ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ವೇದಾಂತ್ ಆಚಾರ್ಯರವರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಈ ಪಂದ್ಯಾವಳಿಯು ಕೆ. ಎಲ್.ಎಸ್ ವಿಶ್ವನಾಥ್‌ರಾವ್ ದೇಶ್‌ಪಾಂಡೆ ಇನ್ಸಿಟ್ಟೂಟ್ ಆಫ್ ಟೆಕ್ನಾಲಜಿ, ಹಳಿಯಾಲ್, ಉತ್ತರ ಕನ್ನಡ, ಇಲ್ಲಿ ದಿನಾಂಕ ೫ ಮತ್ತು ೬ ಅಕ್ಟೋಬರ್ ೨೦೨೬ ರಂದು ನಡೆಯಿತು.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಹರ್ಷ ವ್ಯಕ್ತಪಡಿಸಿದ್ದಾರೆ.

