# Tags
#ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ಕಡಲ ತೀರದ ಸ್ವಚ್ಚತಾ ಅಭಿಯಾನ(Cleaning Drive from the students of SMVITM)

 ಬಂಟಕಲ್ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ಕಡಲ ತೀರದ ಸ್ವಚ್ಚತಾ ಅಭಿಯಾನ

(Bantakal) ಬಂಟಕಲ್‌ ; ರಾಷ್ಟ್ರೀಯ ಮಾಲಿನ್ಯ ನಿಯಂತ್ರಣಾ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್‌ ಕ್ರಾಸ್‌ ಘಟಕ, ರೋಟರಾಕ್ಟ್‌ ಘಟಕ ಇದರ ಜಂಟಿ ಆಶ್ರಯದಲ್ಲಿ ಮಲ್ಪೆ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನವನ್ನು ಆಯೋಜಿಸಲಾಗಿತ್ತು.

ಈ ಸ್ವಚ್ಚತಾ ಅಭಿಯಾನದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪಾಲ್ಗೊಂಡಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸದಸ್ಯರಾದ  ರಘುನಾಥ್, ಜಯರಾಮ್ ನಾಯಕ್ ನಾಯಕ್, ಶ್ರೀಮತಿ ರೇಷ್ಮಾ ಹಾಗೂ ಶ್ರೀಮತಿ ಬಬಿತ ಪೂಜಾರಿಯವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಡಲ ತೀರದಲ್ಲಿ ಬಹಳಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.

ಸಂಸ್ಥೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳ ಸೇವಾ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರಲ್ಲೂ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯು ಭವಿಷ್ಯದಲ್ಲಿ ಇಂತಹ ಹಲವು ಕಾರ್ಯಕ್ರಮಗಳವನ್ನು ಹಮ್ಮಿಕೊಳ್ಳಲಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2