# Tags
#ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಂಕರಿಂಗ್ ಕಾರ್ಯಾಗಾರ (ATL Mentoring Session by Students of SMVITM)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಂಕರಿಂಗ್ ಕಾರ್ಯಾಗಾರ  

(Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪ್ರಥಮ್‌ ಕಾಮತ್, ನಿಶಿತಾ ರಾವ್ ಮತ್ತು ಕೀರ್ತನಾ ಹೆಬ್ಬಾರ್ ಇವರುಗಳು ಆರ್ಡಿನೊ ಪ್ರೊಗ್ರಾಮಿಂಗ್ ಮತ್ತು ಪ್ರಾಜೆಕ್ಟ್‌ ತಯಾರಿಕೆ ಕುರಿತಾಗಿ ಪ್ರಾಯೋಗಿಕ ಕಲಿಕಾ ಮಾರ್ಗದರ್ಶನ ಕಾರ್ಯಾಗಾರವನ್ನು ಕಾರ್ಕಳ ಬೈಲೂರಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಅಟಲ್‌ಟಿಂಕರಿಂಗ್ ಲ್ಯಾಬ್‌ನಲ್ಲಿ ನಡೆಸಿಕೊಟ್ಟರು.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸೆನ್ಸಾರ್‌ಗಳು, ಸರ್ವೋ ಮೋಟಾರ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯ ಬಗ್ಗೆ ಈ ಕಾರ್ಯಾಗಾರದಲ್ಲಿ  ಮಾಹಿತಿ ನೀಡಲಾಯಿತು.

 ಇಂತಹ ಕಾರ್ಯಾಗಾರಗಳು ಮತ್ತು ಪ್ರಾಯೋಗಿಕ ಕಲಿಕೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.

ವಿದ್ಯಾರ್ಥಿಗಳ ಕೌಶಲ್ಯಗಳನ್ನು ಅಭಿವೃದ್ದಿ ಪಡಿಸಲು ಮತ್ತು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತದ ಬಗ್ಗೆ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಕಲಿಯಲು ಸಹಾಯ ಮಾಡುವ ಉದ್ದೇಶದಿಂದ ಅಟಲ್‌ಟಿಂಕರಿಂಗ್ ಲ್ಯಾಬ್‌ಗಳನ್ನು ಸರ್ಕಾರದಿಂದ ಸ್ಥಾಪಿಸಲಾಗಿದೆ.

 ಗಣಕಯಂತ್ರ ವಿಭಾಗದ ಪ್ರಾಧ್ಯಾಪಕರಾದ ರಾಘವೇಂದ್ರ ಹೆಗಡೆ ಈ ಕಾರ್ಯಾಗಾರವನ್ನು ಸಂಯೋಜಿಸಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2