• Home  
  • ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Talk on Drug Addiction and Anti-Ragging at SMVITM)
- social service

ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Talk on Drug Addiction and Anti-Ragging at SMVITM)

Share: ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು.  ಶ್ರೀ ಪ್ರಮೋದ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್, ಅಪರಾಧ ವಿಭಾಗ, ಮಲ್ಪೆ, ಉಡುಪಿ (Shri Pramod […]

ಬಂಟಕಲ್;‌ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ

(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು.

 ಶ್ರೀ ಪ್ರಮೋದ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್, ಅಪರಾಧ ವಿಭಾಗ, ಮಲ್ಪೆ, ಉಡುಪಿ (Shri Pramod Kumar, a distinguished Police Inspector, Crime section, Malpe) ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

 ಇವರು ಮಾತನಾಡಿ, ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನು ಹೇಗೆ ನಾಶಪಡಿಸುತ್ತದೆ ಮತ್ತು ಮಾದಕ ವ್ಯಸನದಿಂದಾಗಿ ವ್ಯಕ್ತಿಗೆ ಮಾತ್ರವಲ್ಲದೆ ಸಮಾಜಕ್ಕೆ ಉಂಟಾಗಬಹುದಾದ ದುಷ್ಪರಿಣಾಮದ ಬಗ್ಗೆ ಮಾಹಿತಿಯನ್ನು ನೀಡಿದರು.

  ಮಾದಕ ವಸ್ತುಗಳ ತಯಾರಿಕೆ, ಮಾರಾಟ, ಖರೀದಿ ಮತ್ತು ಬಳಕೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲು ಭಾರತೀಯ ದಂಡಸಂಹಿತೆ ಅಡಿಯಲ್ಲಿ ಇರುವಂತಹ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ (Dr. Thirumaleshwara Bhat, Principal, SMVITM) ಮಾತನಾಡಿ, ಕಾರ್ಯಾಗಾರದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.

 ಕಾರ್ಯಾಗಾರದಲ್ಲಿ ಕೌನ್ಸೆಲಿಂಗ್ ಘಟಕ, ರಾಷ್ಟ್ರೀಯ  ಸೇವಾ ಯೋಜನೆಯ ಸಂಯೋಜಕರು ಮತ್ತು ಸದಸ್ಯರು, ಪ್ರಥಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವೀಂದ್ರ ಎಚ್ ಜೆ (Dr. Ravindra H J, HOD, Department of Physics) ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.