ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಡಿ. 27-30 ವರೆಗೆ ವರ್ಣೋತ್ಸವ 2023( Bantakal Tecnical College: Dec.27-30 Varnothsava 2023)
23 December 2023
0 Comments
62 Views
Share: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿ.27 ರಿಂದ ಡಿ. ರವರೆಗೆ ವರ್ಣೋತ್ಸವ 2023 (Bantakal) ಬಂಟಕಲ್ಲು: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ 27 ರಿಂದ 30 ಡಿಸೆಂಬರ್ 2023ರವರೆಗೆ ವಿದ್ಯಾರ್ಥಿಗಳಿಗಾಗಿ “ತಾಂತ್ರಿಕ-ಸಾಂಸ್ಕೃತಿಕ” ಸ್ಪರ್ಧೆ “ವರ್ಣೋತ್ಸವ 2023” ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಾದಿರಾಜ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ರತ್ನಕುಮಾರ್ (Rathnakumar)ಹೇಳಿದರು. ಅವರು ಶನಿವಾರ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿ ೨೭ರ ಬುಧವಾ ಬೆಳಿಗ್ಗೆ 10 ಗಂಟೆಗೆ […]
Share:
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿ.27 ರಿಂದ ಡಿ. ರವರೆಗೆ ವರ್ಣೋತ್ಸವ 2023
(Bantakal) ಬಂಟಕಲ್ಲು: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ 27 ರಿಂದ 30 ಡಿಸೆಂಬರ್ 2023ರವರೆಗೆ ವಿದ್ಯಾರ್ಥಿಗಳಿಗಾಗಿ “ತಾಂತ್ರಿಕ-ಸಾಂಸ್ಕೃತಿಕ” ಸ್ಪರ್ಧೆ “ವರ್ಣೋತ್ಸವ 2023” ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಾದಿರಾಜ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ರತ್ನಕುಮಾರ್ (Rathnakumar)ಹೇಳಿದರು.
ಅವರು ಶನಿವಾರ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ ೨೭ರ ಬುಧವಾ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ ತಂತ್ರಿಗಳು (Srinivasa Thanthri) ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ವಿದ್ಯಾಸಂಸ್ಥೆಯ ನಿಯಮಾವಳಿಯಂತೆ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಶ್ರೀರಕ್ಷಾ ಆಚಾರ್ಯ ಮತ್ತು ಶ್ರೀ ಅಭಿನವ ಕರಬ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ರತ್ನಕುಮಾರ್ ವಹಿಸಲಿದ್ದಾರೆ.
ಈ ದಿನ ನಡೆಯುವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪಕ್ಕದ ರಾಜ್ಯ, ಜಿಲ್ಲೆಯ ತಾಂತ್ರಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ವಿವಿಧ ತಾಂತ್ರಿಕ ಸ್ಪರ್ಧೆಗಳ ಜೊತೆಗೆ ನೃತ್ಯ, ಗಾಯನ, ಫೋಟೋಗ್ರಫಿ, ಚಿತ್ರಕಲೆ, ಮುಖವರ್ಣ ಸ್ಪರ್ಧೆ ನಡೆಯಲಿರುವುದು. ಅದೇ ದಿನ ಸಂಜೆ ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮವು ನಡೆಯಲಿದೆ.
ಡಿಸಂಬರ್ 28ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ವಿನಯ್ ವೈಷ್ಣವ್, ಸಹ ನಿರ್ದೇಶಕರು, ಟ್ಯಾಲೆಂಟ್ ಎಕ್ವಿಸಿಶನ್, ಬೆಂಗಳೂರು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಮಾರಂಭವು ಪರಮಪೂಜ್ಯ ಶ್ರೀ ಸೋದೆ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅದೇ ದಿನ ಸಂಜೆ ಕಾಲೇಜಿನ ಯಕ್ಷಗಾನ ಸಂಘ “ಯಕ್ಷಸಿಂಚನ”ದ ವಿದ್ಯಾರ್ಥಿಗಳಿಂದ 3 ಗಂಟೆಯ ಕಾಲ ಯಕ್ಷಗಾನ ಪ್ರದರ್ಶನ ನಡೆಯಲಿದೆ.
29 ಡಿಸಂಬರ್ 2023ರಂದು ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.
ಮಧ್ಯಾಹ್ನ 3ಗಂಟೆಗೆ ಸಭಾ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗುವ ಸಮಾರಂಭವು ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಏಸ್ ಮೈಕ್ರೋಮೆಟಿಕ್ ಮ್ಯಾನುಫ್ಯಾಕ್ಚರಿಂಗ್ ಇಂಟೆಲಿಜೆನ್ಸ್ ಟೆಕ್ನೋಲೊಜೀಸ್, ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಭಾರತಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಅದಮಾರು ಮಠದ ಪೂಜ್ಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಶನಿವಾರ, 30 ಡಿಸಂಬರ್ 2023ರಂದು ಬೆಳಗ್ಗೆ 10ರಿಂದ “ಆಟೋ ಎಕ್ಸ್ಪೋ” ದುಬಾರಿ ವಾಹನಗಳ ಪ್ರದರ್ಶನ ಮತ್ತು ಹಳೆ ವಿದ್ಯಾರ್ಥಿಗಳ ಸಮಾವೇಶ ಸಮಾರಂಭ ನಡೆಯಲಿದೆ.
ಸಂಜೆ 7ಗಂಟೆಗೆ ಪ್ರತಿಷ್ಟಿತ ಮ್ಯೂಸಿಕಲ್ ಬ್ಯಾಂಡ್ ಸಂಸ್ಥೆಯಾದ “ಮೈಸೂರು ಎಕ್ಸಪ್ರೆಸ್”(Mysore Express Musical Band) ತಂಡದವರಿಂದ ಸಂಗೀತ ರಸಮಂಜರಿ ಮನೋರಂಜನಾ ಕಾರ್ಯಕ್ರಮ ಜರಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರು (Sri Sode Vadiraja Swamiji) ಉಪಸ್ಥಿತರಿದ್ದು, ಆಶೀರ್ವಚನ ನೀಡಲಿದ್ದಾರೆ ಎಂದೂ ಶ್ರೀ ರತ್ನಕುಮಾರ್ ಮಾಹಿತಿ ನೀಡದರು.
ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ತಿರುಮಲೇಶ್ವರ ಭಟ್ (Principal PROF DR Tirumaleshwara Bhat) ಸ್ವಾಗತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್ (Vice Principal DR Ganesh Aithal), ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಶ್ರೀಮತಿ ರವಿಪ್ರಭಾ (Smt Raviprabha), ರೋಶನ್ (Roshan), ಡಾ. ಸೂರಜ್ ನೊರೊನ್ಹಾ (DR Sooraj Noronha) ಉಪಸ್ಥಿತರಿದ್ದರು.