# Tags
#ಕ್ರೀಡೆ #ಶಾಲಾ ಕಾಲೇಜು

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ(VTU Mangalore Zone Throwball Tournament (Women) 2024 . SMVITM, Bantakal Hosts Prestigious Sporting Event)

 ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ

 (Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2024-25 ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಯೋಜನೆಯಲ್ಲಿ ಮಂಗಳವಾರ  ನೆರವೇರಿತು.

ಥ್ರೋಬಾಲ್ ಪಂದ್ಯಾವಳಿಯನ್ನು ಕಾಪು ತಹಶೀಲ್ದಾರ್‌ ಶ್ರೀಮತಿ ಪ್ರತಿಭಾ ಆರ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಸೋಲುಗಳ ಲೆಕ್ಕಾಚಾರ ಮಾಡದೆ, ಕ್ರೀಡಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಆಟ ಆಡಿ ಎಂದು ಭಾಗವಹಿಸಿದ ಮಹಿಳಾ ಆಟಗಾರರಿಗೆ ಕಿವಿ ಮಾತನ್ನು ಹೇಳಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಡಾ. ಪ್ರತಿಭಾ ಆರ್ ಇವರನ್ನು ಮಾದರಿಯಾಗಿ ಪರಿಗಣಿಸಿ ಉತ್ತಮ ಸಾಧನೆ ಮಾಡುವಂತೆ ಹೇಳಿದ ಅವರು, ಕ್ರೀಡಾ ಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಗೌರವ ಅತಿಥಿಗಳಾಗಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಬೆಳ್ಮಣ್ ಭಾಗವಹಿಸಿದ್ದರು.

ವಿವಿಧ ಇಂಜಿನಿಯರಿಂಗ್ ಕಾಲೇಜಿನ ಒಟ್ಟು ಒಂಭತ್ತು ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

  ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್  ಕಾಲೇಜು, ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ, ಸಂತ ಜೋಸೆಫ್ ಇಂಜಿನಿಯರಿAಗ್ ಕಾಲೇಜು ಮಂಗಳೂರು ಇಲ್ಲಿನ  ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರು.

 ಪಂದ್ಯದಲ್ಲಿ ವಿಜೇತರಾದವರಿಗೆ ಸಂಸ್ಥೆಯ ಪ್ರಾಂಶುಪಾಲರು ಬಹುಮಾನ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ  ಪೌಲ್ ಸೂರಜ್ ಮತ್ತು ಶುಭಶ್ರೀ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2