ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ (K Prakash Shetty the President of centenary Building construction committy of Bantara yane Nadavara Sangha)
ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ
(Mangaluru) ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ (MRG Groups President K Prakash Shetty)ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಇವರನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈ(Maladi Ajitkumar Rai)ಯವರು ಹಾಗೂ ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ ಜೆ ಶೆಟ್ಟಿ(DR AJ Shetty), ಮುಂಬೈ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ(Kanyana Sadashiva Shetty), ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ (DR M Mohan Alva), ರವಿ ಎಸ್ ಶೆಟ್ಟಿ ಸಾಯಿರಾಧ ಮುಂಬೈ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ(Aikala Hareesh Shetty), ಮಾತೃಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ, ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಕೆ. ಎಮ್ ಶೆಟ್ಟಿ, ಮಾತೃಸಂಘದ ಕೋಶಾಧಿಕಾರಿ ಸಿಎ ರಾಮ್‌ಮೋಹನ್ ರೈ, ವಿಜಯ ಶೆಟ್ಟಿ ಮುಂಬೈ, ಪೂನ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಸುಗ್ಗಿ, ಬೆಂಗಳೂರು ಬಂಟರ ಸಂಘದ ಮಾಜಿ-ಅಧ್ಯಕ್ಷ ಉಪೇಂದ್ರ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಶೆಟ್ಟಿ, ಆರ್ಕಿಟೆಕ್ ಸನತ್ ಕುಮಾರ್ ಶೆಟ್ಟಿ, ಸುಪ್ರೀತ್ ಆಳ್ವ, ವಿನೋದ್ ಶೆಟ್ಟಿ, ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್ ರವಿರಾಜ್ ಶೆಟ್ಟಿ, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಮಾತೃಸಂಘದ ಆಡಳಿತಾಧಿಕಾರಿ ಉಮೇಶ್ ರೈ ಇವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.