ಬಂಟ್ವಾಳ: ಕಾರು ಬೆಂಕಿಗಾಹುತಿ: ಪ್ರಯಾಣಿಕರು ಪಾರು (Bantwala Car caches fire: Passengers escape)
ಬಂಟ್ವಾಳ: ಕಾರು ಬೆಂಕಿಗಾಹುತಿ: ಪ್ರಯಾಣಿಕರು ಪಾರು
(Bantwala) ಬಂಟ್ವಾಳ: ಮೂಡುಬಿದಿರೆ – ಬಂಟ್ವಾಳ ರಸ್ತೆಯ ಮಧ್ಯದ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಕರಟಿ ಹೋದ ಘಟನೆ ನಡೆದಿದ್ದು, ಇದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಸುದ್ದಿ ತಿಳಿದ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಇಳಿದ ಪರಿಣಾಮ ಯಾರಿಗೂ ಗಾಯಗಳಾಗಿಲ್ಲ. ಕಾರು ಮಾತ್ರ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಹಠಾತ್ ಘಟನೆಯಿಂದಾಗಿ ಬಂಟ್ವಾಳ-ಮೂಡಬಿದಿರೆ ರಸ್ತೆಯಲ್ಲಿ ತಾಸುಗಳ ಕಾಲ ಸಂಚಾರ ಅಸ್ತವ್ಯಸ್ತ ಗೊಂಡಿತು.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆಯೆನ್ನಲಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಬ್ರೇಕ್ ಹಾಕಿದರೂ ಕಾರು ನಿಲ್ಲದೇ ಇದ್ದು, ಬಳಿಕ ಚಾಲಕ ಸಮಯ ಪ್ರಜ್ಞೆಯಿಂದ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ.