ಬಂಟ್ವಾಳ ಕ್ಷೇತ್ರದ ಜನತೆಯ ಋಣ ಇದೆ: ಬಿ. ರಮಾನಾಥ ರೈ
ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಅವರ 72 ನೇ ಹುಟ್ಟು ಹಬ್ಬದ ಪ್ರಯುಕ್ತ ಪಾಣೆಮಂಗಳೂರು ಬ್ಲಾಕ್, ಯುವ ಕಾಂಗ್ರೆಸ್ ಹಾಗೂ ಅಲ್ಪ ಸಂಖ್ಯಾತ ಘಟಕದ ವತಿಯಿಂದ ಬಿ.ಸಿ. ರೋಡಿನ ಹೋಟೇಲ್ ರಂಗೋಲಿ ಸಭಾಂಗಣದಲ್ಲಿ ಹಾಗೂ ಬಂಟ್ಚಾಳ ಬ್ಲಾಕ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಬುಧವಾರ ನಡೆಯಿತು.
ಪ್ರತ್ಯೇಕವಾಗಿ ಎರಡು ಕಡೆಯಲ್ಲಿ ನಡೆದ ಶಿಬಿರವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ಉದ್ಘಾಟಿಸಿ ಮಾತನಾಡಿ, ತನ್ನ ಬದುಕಿನುದ್ದಕ್ಕೂ ಸಾಮಾಜಿಕ ಸೇವೆಯನ್ನು ಮುಂದುವರಿಸಲಿದ್ದೆನೆ. ಶಾಸಕ, ಮಂತ್ರಿಯಾಗಿದ್ದ ಕಾಲದಲ್ಲಿ ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿರಿಸಿಕೊಂಡು ಅಭಿವೃದ್ಧಿಕೆಲಸ ಮಾಡಿರುವ ತೃಪ್ತಿ ಹೊಂದಿದ್ದೇನೆ ಎಂದರು.
ಅಪಪ್ರಚಾರದಿಂದ ಚುನಾವಣೆಯಲ್ಲಿ ಸೋಲಾದರೂ ಬಂಟ್ವಾಳ ಕ್ಷೇತ್ರದ ಜನತೆಯ ಋಣ ತನ್ನ ಮೇಲಿದ್ದು,ಅದನ್ನು ತನ್ನ ಜನ್ಮ, ಜನ್ಮಾಂತರದಲ್ಲಿ ಮರೆಯಲು ಸಾಧ್ಯಯವಿಲ್ಲ. ರಾಜಕಾರಣದಲ್ಲಿ ಪರ- ವಿರೋಧವಿರುವುದು ಸಹಜವಾಗಿದ್ದು, ಪಕ್ಷದ ಕಾರ್ಯಕರ್ತರಿಗೆ ನೋವಾಗದಂತೆ ಕೆಲಸ ಮಾಡುವುದರ ಜತೆಗೆ, ಪಕ್ಷದ ಏಳಿಗೆಗೂ ಶ್ರಮಿಸಿದ್ದೆನೆ. ಮುಂದಿನ ದಿನದಲ್ಲಿಯೂ ಶಕ್ತಿಮೀರಿ ಕೆಲಸ ಮಾಡುವುದಾಗಿ ಭರವಸೆಯಿತ್ತರು.
ರೋಟರಿ ಜಿಲ್ಲಾ ಮಾಜಿ ಗವರ್ನರ್ ಪ್ರಕಾಶ್ ಕಾರಂತ್ ಅವರು ಶುಭಾಶಂಸನೆಗೈದು ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ರಕ್ತದಾನ, ಸಾರ್ವಜನಿಕರ ಆರೋಗ್ಯ ತಪಾಸಣೆಯಂತ ಶಿಬಿರವನ್ನು ಆಯೋಜಿಸುವ ಮೂಲಕ ಆರ್ಥ ಪೂರ್ಣವಾಗಿ ಆಚರಿಸಿರುವುದು ಅಭಿನಂದನೀಯವಾಗಿದೆ ಎಂದರು.
ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್,
ಮಾಜಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಪದ್ಮಶೇಖರ ಜೈನ್, ಮಾಜಿ ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ಭೂಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,
ಪಕ್ಷದ ಮುಖಂಡರಾದ ಮಾಯಿಲಪ್ಪ ಸಾಲಿಯಾನ್, ಸಂಜೀವ ಪೂಜಾರಿ ಬೊಳ್ಳಾಯಿ, ಶಬೀರ್ ಸಿದ್ದಕಟ್ಟೆ, ಮಧುಸೂದನ್ ಶೆಣೈ, ಚಿತ್ತರಂಜನ್ ಶೆಟ್ಟಿ, ಸದಾಶಿವ ಬಂಗೇರ, ಜಗದೀಶ್ ಕೊಯಿಲ, ರಮೇಶ್ ನಾಯಕ್, ಸುರೇಶ್ ಜೋರ, ಸುರೇಶ್ ಕುಮಾರ್ ಕುಲಾಲ್, ವೆಂಕಪ್ಪ ಪೂಜಾರಿ ಬಂಟ್ವಾಳ, ಇಬ್ರಾಹಿಂ ನವಾಝ್ ಬಡಕಬೈಲು, ಲವೀನಾ ವಿಲ್ಮಾ ಮೋರಸ್ ಮೊದಲಾದವರಿದ್ದರು.
ಇದೇ ವೇಳೆ ಅತೀ ಹೆಚ್ಚು ರಕ್ತದಾನಗೈದ
ಸುನೀಲ್, ಮನೋಹರ್ ನೇರಂಬೋಳು ಅವರನ್ನು ಸನ್ಮಾನಿಸಲಾಯಿತು.
ಕೆಎಂಸಿಯ ಹೆಲ್ತ್ ಕಾಡ್೯ ಸಾಂಕೇತಿಕವಾಗಿ ವಿತರಿಸಲಾಯಿತು.
ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಆಚರಿಸಲಾಯಿತು.
ಯುವ ಕಾಂಗ್ರೆಸ್ ಕಾರ್ಯಕರ್ತರು 72 ಗುಲಾಬಿಯುಳ್ಳ ಹೂಮಾಲೆ ಹಾಕಿದರೆ, ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.
ಬಂಟ್ಚಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ
ಬೇಬಿಕುಂದರ್ ಸ್ವಾಗತಿಸಿ, ವಂದಿಸಿದರು.
ನಿಶ್ಚಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ವತಿಯಿಂದ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

