• Home  
  • ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ (bantBantwal Urban Development Authority meeting)
- ಜಿಲ್ಲಾಡಳಿತ - ಸಂಘ, ಸಂಸ್ಥೆಗಳು

ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ (bantBantwal Urban Development Authority meeting)

Share: ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆ (Bantwala) ಬಂಟ್ವಾಳ ; ಬಂಟ್ವಾಳ ತಾಲೂಕಿನಲ್ಲಿ 9/11 ನಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ಮತ್ತು ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಂಗಳವಾರ ನಡೆದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯಲ್ಲಿ ಕೈಗೊಳ್ಳಲಾಯಿತು.  ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ […]

(Bantwala) ಬಂಟ್ವಾಳ ; ಬಂಟ್ವಾಳ ತಾಲೂಕಿನಲ್ಲಿ 9/11 ನಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ಮತ್ತು ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಂಗಳವಾರ ನಡೆದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯಲ್ಲಿ ಕೈಗೊಳ್ಳಲಾಯಿತು.

 ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಈ ನಿರ್ಣಯ ಕೈಗೊಳ್ಳಲಾಯಿತು.

 ಅದೇರೀತಿ ಬಂಟ್ವಾಳ ಕಸಬಾ ಗ್ರಾಮದ ಗಿರಿಗುಡ್ಡೆಯಲ್ಲಿರುವ ಕೆರೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಡತವನ್ನು ಜಿಲ್ಲಾಧಿಕಾರಿಯವರಿಗೆ ಕಳುಹಿಸಿಕೊಡಲು ನಿರ್ಣಯಿಸಲಾಯಿತು.

 ಬುಡಾ ಸದಸ್ಯರಾದ ಮನೋಹರ್ ಕುಲಾಲ್, ಅಬ್ದುಲ್ ರಜಾಕ್, ಹರೀಶ್ ಅಜ್ಜಿಬೆಟ್ಟು, ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿಅಧಿಕಾರಿ ಗೋಕುಲದಾಸ್ ಭಕ್ತ, ನರಿಕೊಂಬು ಗ್ರಾಮ ಪಂಚಾಯತ್ ಅಧಿಕಾರಿ ಹರೀಶ್, ಪುರಸಭಾ ವ್ಯವಸ್ಥಾಪಕ ಅಬ್ದುಲ್ ರಜಾಕ್, ಯೋಜನಾ ಸದಸ್ಯ ಕಾರ್ಯದರ್ಶಿ ಗಾಯತ್ರಿ ಡೊಂಬರ ಉಪಸ್ಥಿತರಿದ್ದರು. 

Leave a comment

Your email address will not be published. Required fields are marked *

eMedia Kannada  @2025. All Rights Reserved.