ಬಂಟ್ವಾಳ: ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಮೃತ್ಯು
(Bantwala) ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಮನೆಯ ಮಹಡಿಯಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಮುಂಜಾನೆ ನಡೆದಿದೆ.
ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್(15) ಮೃತಪಟ್ಟ ಬಾಲಕ.
ಆದಿಶ್ ಮನೆಮಂದಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆಯ ಹೊರಗೆ ಬಂದಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ವಿಪರೀತ ರಕ್ತಸ್ರಾವಗೊಂಡಿದೆ.
ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬರುವಾಗಲೇ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದ್ದು, ಅದಾಗಲೇ ಮೃತಪಟ್ಟಿದ್ದನು.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು ಎನ್ನಲಾಗಿದೆ.
ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ (UT Khader) ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

