• Home  
  • ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Coastal districts are being treated unfairly again and again in the budget: Kaup MLA Gurme Suresh Shetty)
- ರಾಜಕೀಯ

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Coastal districts are being treated unfairly again and again in the budget: Kaup MLA Gurme Suresh Shetty)

Share: ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ   ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡು: ಆರೋಪ (Kaup) ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ದಾಖಲೆಯ ರಾಜ್ಯ  ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಯ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.  ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. […]

(Kaup) ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ದಾಖಲೆಯ ರಾಜ್ಯ  ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಯ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

 ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. ಓಟ್‌ ಬ್ಯಾಂಕ್‌ ಮತ್ತು ಸ್ಥಳೀಯಾಡಳಿತ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗಿದೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್‌ ಇದಾಗಿದೆ.

  ಸಂಪತ್ತಿನ ಸಮಾನ ಹಂಚಿಕೆ ಎಂಬುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಉಡುಪಿ ಜಿಲ್ಲೆಯನ್ನು ಕಡೆಗಣಿಸುತ್ತಿರುವುದು ಖಂಡನೀಯ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ. ಬೆಲೆ ಏರಿಕೆಗೆ ಕಡಿವಾಣ ಬೀಳಲಿದೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದೂ   ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.