• Home  
  • ಬಪ್ಪನಾಡು : ವಿಜೃಂಭಣೆಯ  ಹಗಲು ರಥೋತ್ಸವ ಸಂಪನ್ನ (Bappanadu: A glorious daytime chariot festival)
- ಧಾರ್ಮಿಕ

ಬಪ್ಪನಾಡು : ವಿಜೃಂಭಣೆಯ  ಹಗಲು ರಥೋತ್ಸವ ಸಂಪನ್ನ (Bappanadu: A glorious daytime chariot festival)

Share: ಬಪ್ಪನಾಡು : ವಿಜೃಂಭಣೆಯ  ಹಗಲು ರಥೋತ್ಸವ ಸಂಪನ್ನ (Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ  ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಹಗಲು ರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಧಾರ್ಮಿಕ ಕಾರ್ಯಕ್ರಮಗಳ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ರಾಘವೇಂದ್ರ ಉಡುಪ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ದೇವರ ಹಗಲು ರಥೋತ್ಸವ, ಪಲ್ಲಪೂಜೆ ಬಳಿಕ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.  ಈ ಸಂದರ್ಭ […]

(Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ  ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಹಗಲು ರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಧಾರ್ಮಿಕ ಕಾರ್ಯಕ್ರಮಗಳ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ರಾಘವೇಂದ್ರ ಉಡುಪ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ದೇವರ ಹಗಲು ರಥೋತ್ಸವ, ಪಲ್ಲಪೂಜೆ ಬಳಿಕ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

 ಈ ಸಂದರ್ಭ ಕ್ಷೇತ್ರದ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲ ಕಾಡಿ, ಅನುವಂಶಿಕ ಮೊಕ್ತೇಸರ ಹಾಗೂ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜಿ ಸಚಿವ ಅಭಯ್ ಚಂದ್ರ ಜೈನ್,  ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು,  ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಮತ್ತಿತರರು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗುರುವಾರ ರಾತ್ರಿ ಶ್ರೀ ದೇವರ ಶಯನೋತ್ಸವ, ಶುಕ್ರವಾರ ಬೆಳಿಗ್ಗೆ ಕವಾಟೋದ್ಘಾಟನೆ, ರಾತ್ರಿ ಬ್ರಹ್ಮ ರಥೋತ್ಸವ ನಡೆಯಲಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.