ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ
ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ಇದರ ವತಿಯಿಂದ ಇಂದು ದಿನಾಂಕ 31-05-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಧಾರ್ಮಿಕ ಮುಖಂಡರಾದ ಗುಣಕರ್ ಶೆಟ್ಟಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಮೋಯ್ಲಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.