• Home  
  • ಬಿಜೆಪಿ ಮುಖಂಡನ ಪುತ್ರ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಲಾಕ್‌ (BJP leader’s son locked in lodge with minor girl)
- ಅಪರಾಧ

ಬಿಜೆಪಿ ಮುಖಂಡನ ಪುತ್ರ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಲಾಕ್‌ (BJP leader’s son locked in lodge with minor girl)

Share: ಬಿಜೆಪಿ ಮುಖಂಡನ ಪುತ್ರ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಲಾಕ್ ಪೋಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು. (Udupi) ಉಡುಪಿ : ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನೋರ್ವ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.     ಕಟಪಾಡಿ ಮಣಿಪುರದ ನಿವಾಸಿ, ಶ್ರೀಶಾಂತ್ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.    […]

(Udupi) ಉಡುಪಿ : ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನೋರ್ವ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.

    ಕಟಪಾಡಿ ಮಣಿಪುರದ ನಿವಾಸಿ, ಶ್ರೀಶಾಂತ್ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.

   ಲಾಡ್ಜ್‌ಗೆ ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶ್ರೀಶಾಂತ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

   ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಕೂಡ ತನಗೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಶ್ರೀಶಾಂತ್ ವಿರುದ್ಧ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.

   ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.