ಬಿಜೆಪಿ ರೈತ ಮೋರ್ಚಾದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ.
ಬಿಜೆಪಿ ರೈತ ಮೋರ್ಚಾದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ.
ಉಡುಪಿ- ಕಾಪು : ಬಿಜೆಪಿ ರೈತ ಮೋರ್ಚಾದ ವತಿಯಿಂದ ಸೋಮವಾರ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಯಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.
ಅವರು ಈ ಸಂದರ್ಭ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಅಧಿಕಾರ ವಹಿಸಿ ನಾಲ್ಕು ತಿಂಗಳಾಗುತ್ತಾ ಬಂದಿದೆ̤ 143 ತಾಲೂಕುಗಳಲ್ಲಿ ಬರ ಕಾಡುತ್ತಿದೆ. ಸಮರ್ಥ ವಿರೋಧ ಪಕ್ಷವಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನೀಡುತ್ತಿಲ್ಲ. ಕೇಂದ್ರ 6,000 ನೀಡಿದ್ದರೂ, ಸರಕಾರ 4000 ನೀಡುತ್ತಿಲ್ಲ. ರಾಜ್ಯದ 11 ಲಕ್ಷ ರೈತರ ಮಕ್ಕಳಿಗೆ ನೀಡುವ ರೈತ ವಿದ್ಯಾನಿಧಿಯ ಯೋಜನೆ ಸ್ಥಗಿತಗೊಳಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡಿನ 10,000 ರೂ. ಭುಸಿರಿ ಯೋಜನೆಯನ್ನು ರದ್ದುಗೊಳಿಸಿದೆ.
ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿದೆ. ಆದ್ದರಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದೇವಿ ತೀರ್ಥರಾಮ್, ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಉಪಾಧ್ಯಕ್ಷರಾದ ಸುರೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಧೀರಜ್, ಗೋಪಾಲ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಗುರುನಂದನ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಶೆಟ್ಟಿ, ಕೇಶವ ಕೋಟ್ಯಾನ್, ರಾಜ್ಯ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳಾದ ರಾಘವೇಂದ್ರ ಉಪ್ಪೂರು, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್ ಹಾಗೂ ಕಾಪು ಪುರಸಭೆಯ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.