• Home  
  • ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತನ ಕಾಲು ತೊಳೆದು ಕ್ಷಮೆ ಕೋರಿದ ಸಿಎಂ
- ಅಪರಾಧ - ರಾಜಕೀಯ

ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತನ ಕಾಲು ತೊಳೆದು ಕ್ಷಮೆ ಕೋರಿದ ಸಿಎಂ

Share: ಮಧ್ಯಪ್ರದೇಶ; ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವ ಘಟನೆ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಸಿಎಂ ಚೌಹಾಣ್ ಅವರು ಸಂತ್ರಸ್ತನನ್ನು ಭೋಪಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ, ಕುರ್ಚಿಯ ಮೇಲೆ ಕುಳ್ಳಿರಿಸಿ ಸಂತ್ರಸ್ತನ ಕಾಲು ತೊಳೆದು ಕ್ಷಮೆ ಯಾಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಚೌಹಾಣ್, ಘಟನೆಗೆ ಸಂಬಂಧಿಸಿದಂತೆ ವೀಡಿಯೊ ನನಗೆ ದುಃಖ ತಂದಿದೆ. ಇದಕ್ಕಾಗಿ ಕ್ಷಮೆಯಾಚಿಸುತ್ತೇನೆ. ನನಗೆ ಜನರು ದೇವರ ಸಮಾನ.‌ ಈ ರೀತಿಯ ದುಷ್ಕೃತ್ಯಗಳನ್ನು ಸಹಿಸುವುದಿಲ್ಲ ಮತ್ತು ರಾಜ್ಯದ […]

ಮಧ್ಯಪ್ರದೇಶ; ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವ ಘಟನೆ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಸಿಎಂ ಚೌಹಾಣ್ ಅವರು ಸಂತ್ರಸ್ತನನ್ನು ಭೋಪಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ, ಕುರ್ಚಿಯ ಮೇಲೆ ಕುಳ್ಳಿರಿಸಿ ಸಂತ್ರಸ್ತನ ಕಾಲು ತೊಳೆದು ಕ್ಷಮೆ ಯಾಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಚೌಹಾಣ್, ಘಟನೆಗೆ ಸಂಬಂಧಿಸಿದಂತೆ ವೀಡಿಯೊ ನನಗೆ ದುಃಖ ತಂದಿದೆ. ಇದಕ್ಕಾಗಿ ಕ್ಷಮೆಯಾಚಿಸುತ್ತೇನೆ. ನನಗೆ ಜನರು ದೇವರ ಸಮಾನ.‌ ಈ ರೀತಿಯ ದುಷ್ಕೃತ್ಯಗಳನ್ನು ಸಹಿಸುವುದಿಲ್ಲ ಮತ್ತು ರಾಜ್ಯದ ಪ್ರತಿಯೊಬ್ಬ ನಾಗರಿಕನ ಗೌರವವು ತನ್ನ ಗೌರವಕ್ಕೆ ಸಮಾನ ಎಂದರು.

ಆದಿವಾಸಿ ವ್ಯಕ್ತಿ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ಮಾಡುವ ವಿಡಿಯೋ ವೈರಲ್ ಆಗಿತ್ತು. ಕೃತ್ಯಕ್ಕೆ ಖಂಡನೆ ವ್ಯಕ್ತವಾಗುತ್ತಿದ್ದಂತೆ ಆರೋಪಿಯ ಬಂಧನವಾಗಿತ್ತು.

Leave a comment

Your email address will not be published. Required fields are marked *

eMedia Kannada  @2025. All Rights Reserved.