• Home  
  •   ಬೆಂಕಿಗಾಹುತಿಯಾದ ಶಾಲಾ ವಾಹನ : ತಪ್ಪಿದ ಭಾರೀ ದುರಂತ (A school bus caught fire: A major disaster that was missed)
- Uncategorised

  ಬೆಂಕಿಗಾಹುತಿಯಾದ ಶಾಲಾ ವಾಹನ : ತಪ್ಪಿದ ಭಾರೀ ದುರಂತ (A school bus caught fire: A major disaster that was missed)

Share:   ಬೆಂಕಿಗಾಹುತಿಯಾದ ಶಾಲಾ ವಾಹನ : ತಪ್ಪಿದ ಭಾರೀ ದುರಂತ  ಮಣಿಪಾಲ ಪ್ರಗತಿನಗರದ ಕೇಂದ್ರೀಯ ವಿದ್ಯಾಲಯದ ಬಳಿ ಸಂಭವಿಸಿದ ದುರ್ಘಟನೆ (Udupi) ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ವಾಹನವೊಂದು ಸುಟ್ಟು ಕರಕಲಾದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.    ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು […]

(Udupi) ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ವಾಹನವೊಂದು ಸುಟ್ಟು ಕರಕಲಾದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

   ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

    ಅಷ್ಟೊತ್ತಿಗೆ ಬಸ್ ಸುಟ್ಟು ಕರಕಲಾಗಿತ್ತು. ಮಕ್ಕಳನ್ನು ಮನೆಗೆ ಕರೆದೊಯ್ದ ನಂತರ ಬಸ್ಸನ್ನು ನಿಲ್ಲಿಸಿರುವುದರಿಂದ ಬಸ್ಸಿನಲ್ಲಿ ಯಾರೂ ಇರಲಿಲ್ಲ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.