ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ
(Kaup) ಕಾಪು :ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮಿಜಿಯವರು ಮತ್ತವರ ಕುಟುಂಬಿಕರು ಇತ್ತೀಚೆಗೆ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಶೋತ್ಸವ ನಡೆದ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪತ್ನಿ ದೇವಿಗೆ ಪಟ್ಟೆಸೀರೆ ಮತ್ತು ಕಾಣಿಕೆಯನ್ನು ಅರ್ಪಿಸಿದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಸಮಕ್ಷಮದಲ್ಲಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ವತಿಯಿಂದ ಚಂದ್ರಶೇಖರ ಸ್ವಾಮಿಜಿ ದಂಪತಿಯನ್ನು ಗೌರವಿಸಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿಯವರು ಜೀರ್ಣೋದ್ಧಾರ ನಡೆದು ಬಂದ ಹಾದಿ ಮತ್ತು ಮುಂದಿನ ಕಾರ್ಯ ಯೋಜನೆಯ ಬಗ್ಗೆ ವಿವರಿಸಿದರು. ದೇವಳದ ವಾಸ್ತುಶಿಲ್ಪವನ್ನು ಕಂಡು ಈ ದೇವಳಕ್ಕೆ ನನ್ನ ಸಂಪರ್ಕದಲ್ಲಿರುವ ಹಲವಾರು ಗಣ್ಯರನ್ನು ಭೇಟಿ ಮಾಡಲು ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ನನಿಂದಾಗುವ ಸಹಕಾರ ನೀಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದರು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೇಖರ್ ಸಾಲ್ಯಾನ್, ಮನೋಹರ್ ರಾವ್ ಕಲ್ಯ, ಅಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಸಾವಿತ್ರಿ ಗಣೇಶ್, ಜ್ಯೋತಿಷಿ ವಿಶ್ವನಾಥ ಭಟ್ ಎಸ್. ಕೋಡಿ, ಉಷಾ ವಿಶ್ವನಾಥ ಭಟ್, ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮುಲ್ಕಿ, ಭದ್ರತಾ ಸಿಬ್ಬಂದಿ ಗಣೇಶ್ ಆಳ್ವ, ವಿನಯ ಶೆಟ್ಟಿ, ಸಂಜಯ ಕುಮಾರ್, ಸ್ವಾಮೀಜಿಯವರ ಹಿರಿಯ ಸಹೋದರ ವಿಶ್ವನಾಥ್ ಭಟ್ ದಂಪತಿಗಳು, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

