ಬೆಳಗಾವಿ : ಕುಂಭ ಮೇಳದಲ್ಲಿ ಮೃತ ಪಟ್ಟ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ ಮೃಣಾಲ್ (Minister Hebbalkar’s son Mrinal, who rushed to the aid of the family of a deceased person at the Kumbh Mela, was filled with courage)

ಬೆಳಗಾವಿ : ಮೃತರ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ ಮೃಣಾಲ್
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿ
ಮೃತದೇಹಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆ
(Belagavi) ಬೆಳಗಾವಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಗಣೇಶಪುರಕ್ಕೆ ಧಾವಿಸಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಮೃತದೇಹಗಳನ್ನು ತರುವುದು ಸೇರಿದಂತೆ ಕುಟುಂಬಸ್ಥರಿಗೆ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸುಮಾರು 50 ಜನ ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ಪೈಕಿ ಒಂದು ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸ್ಥಳದಲ್ಲೆ ಸಾವನ್ನಪ್ಪಿದ್ದು, 16 ಮಂದಿಗೆ ಗಾಯಗಳಾಗಿವೆ. ಸ್ಥಳೀಯರ ಮೂಲಕ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಷಯ ತಿಳಿಯಿತು. ಇದೀಗ ಸಚಿವರ ಸೂಚನೆಗೆ ಮೇರೆಗೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿರುವೆ ಎಂದು ಮೃಣಾಲ್ ಹೆಬ್ಬಾಳಕರ್ ಹೇಳಿದರು.
ಮಧ್ಯಪ್ರದೇಶದ ಇಂಧೋರ್ ಆಸ್ಪತ್ರೆಯಲ್ಲಿ ಮೃತದೇಹಗಳಿದ್ದು, ಬೆಳಗಾವಿಗೆ ಮೃತದೇಹಗಳನ್ನು ತರುವ ವ್ಯವಸ್ಥೆ ಮಾಡಬೇಕು ಎಂದು ಸಚಿವರು ನಮಗೆ ಆದೇಶ ಮಾಡಿದ್ದಾರೆ. ಕುಟುಂಬಸ್ಥರು, ಬೆಳಗಾವಿ ಜಿಲ್ಲಾಡಳಿತ ಹಾಗೂ ಇಂದೋರ್ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿ ಮೃತ ದೇಹಗಳನ್ನು ತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಒಂದು ಮೃತ ದೇಹವನ್ನು ಇಂದೋರ್‌ನಿಂದ ಬೆಳಗಾವಿಗೆ ತರಲು ಸುಮಾರು 95 ಸಾವಿರ ರೂಪಾಯಿ ಖರ್ಚಾಗಲಿದೆ. ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ನೆರವು ನೀಡಲಾಗುವುದು ಎಂದು ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಹೇಳಿದರು.