• Home  
  • ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ.
- ರಾಜಕೀಯ - ವಿಡಿಯೋ

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ.

Share: ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ. ಬೆಳಪು: ಬೆಳಪು ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ. ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.  ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ರವರು ಚುನಾವಣಾ ಪ್ರಕ್ರಿಯೆ ನಡೆಸಿ […]

ಬೆಳಪು ಗ್ರಾಪಂ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್‌ ಶೆಟ್ಟಿ, ಉಪಾಧ್ಯಕ್ಷೆಯಾಗಿ ಶೋಭಾ ಭಟ್‌ ಅವಿರೋಧ ಆಯ್ಕೆ

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ.

ಬೆಳಪು: ಬೆಳಪು ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ. ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.

 ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ರವರು ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಯುಸಿ ಶೇಖಬ್ಬ, ಗ್ರಾಮ ಪಂಚಾಯತ್ ಸದಸ್ಯರು, ಉಧ್ಯಮಿ ಹರೀಶ್ ನಾಯಕ್ ಕಾಪು, ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ,  ಶೇಖರ್ ಹೆಜಮಾಡಿ ಸಹಿತ ಗಣ್ಯರು ಶುಭ ಹಾರೈಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.