ಬೆಳಪು ಶೋಭಾ ಪೂಜಾರಿ ಮನೆಗೆ ಮಳೆಯಿಂದ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ
ತೀವ್ರ ಗಾಯಗೊಂಡ ಶೋಭಾರವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ
(Belapu) ಬೆಳಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಗ್ರಾಮದ ಮಲಂಗೋಲಿ ಎಂಬಲ್ಲಿಯ ಶೋಭಾ ಪೂಜಾರಿಯವರ ವಾಸದ ಮನೆಯ ಗೋಡೆ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಪರಿಣಾಮ ಶೋಭಾರವರು ತೀವ್ರ ಗಾಯಗೊಂಡಿದ್ದರು. ತೀವ್ರ ಗಾಯಗೊಂಡ ಶೋಭಾರವರು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ,
ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಅವರ ಮನೆಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಸಿತಗೊಂಡ ಮನೆಗೆ ಗರಿಷ್ಠ ಪರಿಹಾರ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ ಶಾಸಕ ಗುರ್ಮೆ, ಅವರ ಶಸ್ತ್ರಚಿಕಿತ್ಸೆಗೆ ನಾವೆಲ್ಲರೂ ಸೇರಿ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬೆಳಪು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಭಟ್, ಸುರೇಂದ್ರ ಪಣಿಯೂರು, ಶ್ರೀಧರ್ ಮಣಿಪುರ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

