ಬೆಳಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ರಾಕೇಶ್ ಕುಂಜೂರು
(Belapu) ಬೆಳಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಉಚ್ಚಿಲ ವಲಯದ ಆಯೋಜನೆಯಲ್ಲಿ ಬೆಳಪು ಸರಕಾರಿ ಸಂಯುಕ್ತ ಪ್ರೌಡ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರವರು ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ, ಮಾರ್ಗದರ್ಶನವನ್ನು ನೀಡಿದರು
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಮಕ್ಕಳಿಗೆ ಪ್ರಮಾಣ ವಚನ ನೀಡಿ, ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಭವಿಷ್ಯ ರೂಪಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶಾಲೆಯ ಎಲ್ಲಾ ಅಧ್ಯಾಪಕರು, ಸೇವಾ ಪ್ರತಿನಿಧಿ ಶ್ರೀಮತಿ ಸವಿತಾ ಶೆಟ್ಟಿ,ಪ್ರೌಡಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕಿ ಶ್ರೀಮತಿ ವಿನುತಾ ಸ್ವಾಗತಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾರವರು ವಂದಿಸಿದರು.

