• Home  
  • ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ (‘Best Society’ Award for Belapu Milk Producers’ Cooperative Society in the District)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ (‘Best Society’ Award for Belapu Milk Producers’ Cooperative Society in the District)

Share: ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ   ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಸಾಮಾನ್ಯ ಸಭೆಯಲ್ಲಿ ಪುರಸ್ಕಾರ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಇದರ 2025 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ ಲಭಿಸಿದೆ.  ಉಡುಪಿ ಜಿಲ್ಲೆಯಲ್ಲಿ  ಬಿ ಎಂ ಸಿ ನಿರ್ವಹಣೆ, ಹಾಲಿನ ಇಳುವರಿ, ಲಾಭಾಂಶ […]

(Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಇದರ 2025 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ ಲಭಿಸಿದೆ.

 ಉಡುಪಿ ಜಿಲ್ಲೆಯಲ್ಲಿ  ಬಿ ಎಂ ಸಿ ನಿರ್ವಹಣೆ, ಹಾಲಿನ ಇಳುವರಿ, ಲಾಭಾಂಶ ಹಾಗೂ ಸರ್ವತೋಮುಖ ಅಭಿವೃದ್ಧಿಯನ್ನು ಮನಗಂಡು ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ನೀಡಲಾಯಿತು.

 ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ  ಡಾ. ದೇವಿ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ದಿನೇಶ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾದವ ರಾವ್  ಇವರಿಗೆ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಒಕ್ಕೂಟದ ಉಪಾಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ಸಮಸ್ತ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರುಗಳ ಸಮ್ಮುಖದಲ್ಲಿ ಅಭಿನಂದಿಸಿ ಸನ್ಮಾನಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.