• Home  
  • ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ
- ಅಪರಾಧ

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ

Share: ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳಲ್ಲಿ ಮೂವರು ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜಿ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ […]

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ

ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

 ಬಂಧಿತ ಆರೋಪಿಗಳಲ್ಲಿ ಮೂವರು ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜಿ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.

 ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 3 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಹಿನ್ನೆಲೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣಾಧಿಕಾರಿ  ಆನಿ ಕುಮಾರ್ ನೇತೃತ್ವದ ತಂಡ ಬುಧವಾರ ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8-45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.

ವಾಹನದಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ 65 ಸಾವಿರ ರೂ. ಹಾಗೂ ವಾಹನಗಳ ಅಂದಾಜು ಮೌಲ್ಯ 7 ಲಕ್ಷ ರೂ. ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.