• Home  
  • ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ (Belthangady Block Congress Urban Committee’s Arambodi Village Booth Progress Meeting)
- ರಾಜಕೀಯ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ (Belthangady Block Congress Urban Committee’s Arambodi Village Booth Progress Meeting)

Share: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಉಪಸ್ಥಿತಿ (Belthangadi) ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ   ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು.    ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ  ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ  […]

(Belthangadi) ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ   ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು.

   ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ  ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ  ಮಾಹಿತಿಯನ್ನು ನೀಡಿದರು.

  ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ವಂದನ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಶೆಟ್ಟಿ, ರಮೇಶ್ ಪೂಜಾರಿ ಮಂಜಿಲ, ಶ್ರೀಮತಿ ಲೀಲಾ ಸುರೇಶ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿ ಮಜಲು, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಕೊಯಿಲ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಓಬಯ್ಯ ಆರಂಬೋಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ,  ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.