ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು
ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು
ಕಾರ್ಕಳ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಎಕಿ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬೆಳ್ಮಣ್ ಬಳಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪಿಲಾರು ನಿವಾಸಿ ಪ್ರವೀಣ್ (30) ಆಚಾರ್ಯ ಎಂದು ಗುರುತಿಸಲಾಗಿದೆ.
ಬೆಳ್ಮಣ್ ಪೇಟೆಯ ಸಮೀಪದ ರಸ್ತೆ ಬದಿಯಲ್ಲಿದ್ದ ಆಲದ ಮರವೊಂದು ಬುಡಸಮೇತ ಉರುಳಿದ್ದು, ಪರಿಣಾಮ ಬೈಕ್ ನಲ್ಲಿ ಸಾಗುತ್ತಿದ್ದ ಪ್ರವೀಣ್ ಅವರ ಮೇಲೆ ಉರುಳಿದ್ದು ಇದರಿಂದ ಗಂಭೀರ ಗಾಯಗೊಂಡ ಅವರು ಅಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭಾರಿ ಮಳೆಗೆ ಇದು ಮೂರನೇ ಬಲಿಯಾಗಿದೆ. ಮರ ಉರುಳಿ ಬೀಳುತ್ತಿರುವ ದೃಶ್ಯ ಸಿಸಿಟಿವಿ ಸೆರೆಯಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಸೇರಿ ರಾತ್ರಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ತೆರವುಗೊಳಿಸಿದ್ದಾರೆ.