• Home  
  • ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ
- ರಾಜಕೀಯ

ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ

Share: ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ ಬೆಳ್ಳೆ: ಕಾಪು ತಾಲೂಕಿನ ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.  ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ಚುನಾವಣಾಧಿಕಾರಿಯಾಗಿದ್ದರು.  ಗ್ರಾ.ಪಂ. ಪಿಡಿಒ ಸುಧಾಕರ […]

ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ

ಬೆಳ್ಳೆ: ಕಾಪು ತಾಲೂಕಿನ ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.

 ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ಚುನಾವಣಾಧಿಕಾರಿಯಾಗಿದ್ದರು.

 ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ,ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ ನಾಯಕ್‌,ಮಾಜಿ ಗ್ರಾ.ಪಂ.ಅಧ್ಯಕ್ಷ ಸುಧಾಕರ ಪೂಜಾರಿ,ಮಾಜಿ ಉಪಾಧ್ಯಕ್ಷೆ ಸಂಧ್ಯಾ ಎಂ. ಶೆಟ್ಟಿ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.