ಬೈಂದೂರು ಮಾಜಿ ಶಾಸಕ, ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ
(Kundapura) ಕುಂದಾಪುರ : ಬೈಂದೂರಿನ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡರಾದ ಕೆ. ಲಕ್ಷ್ಮೀ ನಾರಾಯಣ (85) ಶುಕ್ರವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ, ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.
2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.
ಕೆ. ಲಕ್ಷ್ಮೀ ನಾರಾಯಣರವರ ಮೃತ ದೇಹದ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

