ಬೈಕಿಗೆ ಖಾಸಗಿ ಬಸ್ ಡಿಕ್ಕಿ : ಬೈಕ್ ಸವಾರ ಸಾವು, ಬೈಕ್ ಭಸ್ಮ
(Kundapura) ಕುಂದಾಪುರ: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಸೋಮವಾರ ಸಂಜೆ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಸಿಗಂದೂರಿನ ಶರತ್ (25) ಎಂದು ಗುರುತಿಸಲಾಗಿದೆ.
ಸಿಗಂದೂರು ನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ಬಳಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ವಂಡ್ಲೆ ಕಡೆಗೆ ಹೋಗುತ್ತಿದ್ದ ಶ್ರೀ ದುರ್ಗಾಂಬಾ ಬಸ್ಸಿಗೆ ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತ ಪಟ್ಟಿದ್ದು ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.
ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

