ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು
ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು
ವಿಜಯಪುರ;ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಲೋಕಾಯುಕ್ತ ಡಿವೈಎಸ್ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ.
ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತರು.
ಇವರು ಇಂದು ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು.
ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ತೆರಳಿದ್ದಾರೆ.