ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು (Two boys who went swimming in the Bhadra canal drowned)
ಸಾಂದರ್ಭಿಕ ಚಿತ್ರ
ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು
(Davanagere) ದಾವಣಗೆರೆ: ಭದ್ರಾ ಕಾಲುವೆಯ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲಾದ ಘಟನೆ ದಾವಣಗೆರೆ ತಾಲೂಕಿನ ತಾಲೂಕಿನ ಕುರ್ಕಿ ಗ್ರಾಮದಲ್ಲಿ ರವಿವಾರ ಬೆಳಿಗ್ಗೆ ಘಟಿಸಿದೆ.
ಕುರ್ಕಿ ಗ್ರಾಮದ ಪಾಂಡು (16), ತುರ್ಚಘಟ್ಟ ಗ್ರಾಮದ ಯತೀಂದ್ರ (16) ನೀರು ಪಾಲಾದ ಬಾಲಕರು.
ದಾವಣಗೆರೆಯ ಗುರುಕುಲ ವಸತಿ ಶಾಲೆಯಲ್ಲಿ ಈ ಬಾಲಕರು ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಶಾಲೆಗೆ ರಜೆಯ ಕಾರಂ ಕಟ್ಟಿಗ್ ಸೆಲೂನಿಗೆ ಕಟ್ಟಿಂಗ್ ಮಾಡಿಸಿಕೊಳ್ಳಲು ಇಬ್ವರು ಕುರ್ಕಿ ಗ್ರಾಮಕ್ಕೆ ಬಂದಿದ್ದರು.
ಗ್ರಾಮದ ಬಳಿ ಹರಿಯುತ್ತಿರುವ ದೊಡ್ಡದಾದ ಭದ್ರಾ ಕಾಲುವೆಯಲ್ಲಿ ಪಾಂಡು ಮತ್ತು ಯತೀಂದ್ರ ಈಜಲು ತೆರಳಿದ್ದಾರೆ. ಪಾಂಡುಗೆ ಈಜಲು ಬರುತ್ತಿತ್ತು. ಯತೀಂದ್ರನಿಗೆ ಈಜಲು ಬರುತ್ತಿರಲಿಲ್ಲ. ಮೊದಲು ಪಾಂಡು ಕಾಲುವೆಗೆ ಜಿಗಿದು ಈಜಾಡುತ್ತಿದ್ದ. ನಂತರ ಯತೀಂದ್ರ ಜಿಗಿದಿದ್ದಾನೆ. ಈ ವೇಳೆ ಯತೀಂದ್ರ ಮುಳುಗಿ ಏಳುತ್ತಿದ್ದಾಗ ಪಾಂಡು ಅವನನ್ನು ರಕ್ಷಣೆ ಮಾಡಲು ಬಂದಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಇಬ್ಬರೂನೀರು ಪಾಲಾಗಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.
ಪಾಂಡು ಮೃತದೇಹ ಪತ್ತೆಯಾಗಿದ್ದು, ಯತೀಂದ್ರ ನಾಪತ್ತೆ ಆಗಿದ್ದಯ ಯತೀಂದ್ರನಿಗಾಗಿ ನುರಿತ ಈಜುಗಾರರು ಕಾರ್ಯಾಚರಣೆ ಮುಂದುವರಿಸಿದ್ದಾರೆ.