ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಶ್ರೀಮತಿ ಚೈತನ್ಯ ಕೋಟೆಯವರಿಗೆ ಎರಡು ಚಿನ್ನದ ಪದಕ
(Putturu) ಪುತ್ತೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇಲ್ಲಿಯ ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಶ್ರೀಮತಿ ಚೈತನ್ಯ ಕೋಟೆಯವರು ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ವಿಶ್ವವಿದ್ಯಾಲಯದಲ್ಲಿ ನಡೆದ 7, 8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಇವರು ಕುಕ್ಕೆ ಸುಬ್ರಹ್ಮಣ್ಯ ಸಮೀಪದ, ಬೂದಿಪಳ್ಳದ ಭಾಸ್ಕರ ಕೋಟೆ ಮತ್ತು ವೀಣಾ ಕೋಟೆ ಇವರ ಪುತ್ರಿ ಹಾಗು ತಿರುಮಲ ಭಟ್‌ರವರ ಪತ್ನಿ.

