• Home  
  • ಭಾರೀ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜೂ.7)ಯೂ ರಜೆ
- ಕರಾವಳಿ - ಶಾಲಾ ಕಾಲೇಜು

ಭಾರೀ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜೂ.7)ಯೂ ರಜೆ

Share: ಮಂಗಳೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ(7) ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ […]

ಮಂಗಳೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.

ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ(7) ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.