ಮಂಗಳೂರು : ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜೂ.6 ಮಂಗಳವಾರದಂದು ಮಂಗಳೂರಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 8.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 8.45 ಕ್ಕೆ ಸರ್ಕಿಟ್ ಹೌಸ್‌ಗೆ ತೆರಳುತ್ತಾರೆ.
10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಗೆ ಭೇಟಿ ನೀಡಿ ವಲಯ ಪರಿಶೀಲನಾ ಸಭೆ ನಡೆಸುವರು.ಮಧ್ಯಾಹ್ನ 12ರಿಂದ 12.30 ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು.
12.30 ಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸುತ್ತಾರೆ. ಮಧ್ಯಾಹ್ನ 2 ಗಂಟೆಗೆ ಮಂಗಳೂರಿನಿಂದ ನಿರ್ಗಮಿಸಿ ಉಡುಪಿಗೆ ತೆರಳುತ್ತಾರೆ.
ಉಡುಪಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸುವರು.
5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು.
ಸಂಜೆ 6 ಗಂಟೆಗೆ ಉಡುಪಿಯಿಂದ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಹೂಡುವರು.
ಬುಧವಾರ ಬೆಳಗ್ಗೆ 7 ಗಂಟೆಗೆ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಿಯ ದರ್ಶನ ಮತ್ತು ಪೂಜೆಯಲ್ಲಿ ಭಾಗವಹಿಸುವರು.
ಬೆಳಗ್ಗೆ 11.30 ಕ್ಕೆ ಕೊಲ್ಲೂರಿನಿಂದ ನಿರ್ಗಮಿಸಿ 12.30 ಕ್ಕೆ ಮಂಗಳೂರಿಗೆ ಆಗಮಿಸುವರು.
ಸಂಜೆ 4 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ 4.25 ಕ್ಕೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

