# Tags
#ಅಪರಾಧ

ಮಂಗಳೂರು: ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಮತ್ತಾಜ್‌ಝ್ ಅಲಿ ಮೃತದೇಹ ಪತ್ತೆ (Dead body of former MLA Moidin Bawaʼs Brother Mattaz Ali was found)  

ಮಂಗಳೂರು: ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಮತ್ತಾಜ್‌ಝ್ ಅಲಿ ಮೃತದೇಹ ಪತ್ತೆ

(Mangaluru) ಮಂಗಳೂರು: ಭಾನುವಾರ ಬೆಳಗ್ಗಿನ ಜಾವ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಇಟ್ಟು ನಾಪತ್ತೆಯಾಗಿದ್ದ‌ ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಉದ್ಯಮಿ ಬಿ.ಎಂ. ಮತ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ.

ಮುಳುಕಗು ತಜ್ಙ ಈಶ್ವರ್‌ ಮಲ್ಪೆ ತಂಡ, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ ಗಾರ್ಡ್ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಹುಡುಕಾಟದಲ್ಲಿ ತೊಡಗಿದ್ದರು.

 ಮುಲ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

ಮೃತದೇಹವನ್ನು ನದಿಯಿಂದ ಹೊರಗೆ ತೆಗೆಯುತ್ತಲೇ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ.

ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2