ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ
ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ
ಮಂಗಳೂರು, ಜು 31 : ಉಡುಪಿ ಖಾಸಗಿ ಶಾಲಾ ಶೌಚಾಲಯದಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಖಂಡಿಸಿ ಮತ್ತು ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ಈ ಸಂಧರ್ಭ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಎಲ್ಲಾ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು
ನಳೀನ್ ಕುಮಾರ್ ಕಟೀಲ್ ಅವರು ರಾಜ್ಯ ಸರಕಾರದ ಕಟು ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಪೋಲಿಸ್ ಇಲಾಖೆಯ ಬೇಜವಾಬ್ಧಾರಿ ಹಾಗೂ ನಿರ್ಲಕ್ಷ್ಯದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣವನ್ನು ಸರಿಯಾಗಿ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸ ಬೇಕೆಂದು ಸರಕಾರಕ್ಕೆ ಆಗ್ರಹಿಸಲಾಯಿತು.