• Home  
  • ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ (Mangaluru CCB Police operation: Arrested two people who were transporting drug MDMA)
- ಅಪಘಾತ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ (Mangaluru CCB Police operation: Arrested two people who were transporting drug MDMA)

Share: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ (Mangaluru) ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 15 ಗ್ರಾಂ ಎಂಡಿಎಂಎಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಢ ಘಟನೆ ಘಟಿಸಿದೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು […]

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

(Mangaluru) ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 15 ಗ್ರಾಂ ಎಂಡಿಎಂಎಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಢ ಘಟನೆ ಘಟಿಸಿದೆ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ ಸಿ ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ

ಮಂಜೇಶ್ವರ, ಕಾಸರಗೋಡು ನಿವಾಸಿ ಅಬ್ದುಲ್ ಸಲಾಂ  (30), ಮತ್ತು ಮಂಜೇಶ್ವರ, ಕಾಸರಗೋಡು ಜಿಲ್ಲೆಯ ನಿವಾಸಿ ಸೂರಜ್ ರೈ ಯಾನೆ ಅಂಕಿ(26) ಎಂಬವರನ್ನು ವಶಕ್ಕೆ ಪಡೆದು ಅವರಿಂದ 75,000/-ರೂ  ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,65,000/- ಎಂದು ಅಂದಾಜಿಸಲಾಗಿದೆ.

 ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಸೂರಜ್ ರೈ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಕೇರಳದಿಂದ ಎಂಡಿಎಂಎ ನ್ನು ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಯೋಜೆನೆ ಹಾಕಿಕೊಂಡಿದ್‌ಆರೆ ಎಂದು ಶಂಕಿಸಲಾಗಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. 

 ಈ ಮಾದಕ ವಸ್ತು ಎಂಡಿಎಂಎ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.