# Tags
#ನಿಧನ

 ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣರವರ ಅಂತ್ಯಕ್ರಿಯೆ, ಬುಧವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ (Funeral of former CM SM Krishna in Mandya, Govt. holiday declared in the state on wednesday)

ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣರವರ ಅಂತ್ಯಕ್ರಿಯೆ, ಬುಧವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

(Bengaluru) ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣರವರು ಮಂಗಳವಾರ ಬೆಳಗ್ಗಿನ ಜಾವ ಅಸು ನೀಗಿದ್ದು, ಅವರ ನಿಧನದ ಪ್ರಯುಕ್ತ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದ್ದು, ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ.

ಎಸ್. ಎಂ.ಕೃಷ್ಣರವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು ಎಂದು ಉಪ ಮುಖ್ಯಮಂತ್ರಿ   ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2