# Tags
#ಅಪರಾಧ

 ಮಕ್ಕಳ ಬಾಲ್ಯ ರಕ್ಷಣೆ ನಮ್ಮೆಲ್ಲರ ಹೊಣೆ : ತಹಶಿಲ್ದಾರ್ ಡಾ. ಪ್ರತಿಭಾ ಆರ್ (Protection of children’s childhood is the responsibility allof us : Kaup Tahashikdar Dr. Prathibha R)

ಮಕ್ಕಳ ಬಾಲ್ಯ ರಕ್ಷಣೆ ನಮ್ಮೆಲ್ಲರ ಹೊಣೆ : ತಹಶಿಲ್ದಾರ್ ಡಾ. ಪ್ರತಿಭಾ ಆರ್

(Kaup) ಕಾಪು: ತಹಶೀಲ್ದಾರ್  ಡಾ. ಪ್ರತಿಭಾ ಆರ್ ರವರ ಅಧ್ಯಕ್ಷತೆಯಲ್ಲಿ ಕಾಪು ತಾಲ್ಲೂಕಿನಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿ ಪುರ್ನವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಹೇಳಿದ್ದಾರೆ.

ಕಾಪು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಛೇರಿಯಲ್ಲಿ ಟಾಸ್ಕ್ ಫೋರ್ಸ್ ಅಧಿಕಾರಿಗಳಿಗೆ ಸೂಚನೆ ನೀಡಿ ಅವರು ಮಾತನಾಡಿದರು.

 ಬಾಲ ಕಾರ್ಮಿಕರ ರಕ್ಷಣೆಗಾಗಿ ತಾಲ್ಲೂಕಿನಾದ್ಯಂತ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಾಗಿ ನಡೆಸಬೇಕು. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. 18 ವರ್ಷದೊಳಗಿನವರನ್ನು ಅಪಾಯಕಾರಿ ಕ್ಷೇತ್ರಗಳಲ್ಲಿ ದುಡಿಸಿಕೊಳ್ಳುವಂತಿಲ್ಲ’ ಎಂದರು.

ಕಾನೂನು ಉಲ್ಲಂಘಿಸಿದರೆ ಕನಿಷ್ಠ 6 ತಿಂಗಳಿಂದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕ ಪದ್ಧತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

 ಬಾಲ ಕಾರ್ಮಿಕ ಪದ್ಧತಿ ಹಾಗೂ ಆ ಕುರಿತು ಇರುವ ಕಾನೂನಿನ ಅರಿವು- ನೆರವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಟೊ ಪ್ರಚಾರ, ಬೀದಿ ನಾಟಕ, ಗೋಡೆ ಬರಹದ ಜೊತೆಗೆ ಕರಪತ್ರ ಮತ್ತು ಭಿತ್ತಿ ಚಿತ್ರಗಳನ್ನು ಹಂಚಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

 ಸಾರ್ವಜನಿಕರು ಸಹ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾರಾದರೂ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ– 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ– 112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕೆಂದರು.

  ಉಪತಹಶೀಲ್ದಾರ್ ರವಿಕಿರಣ್, ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾದ ಅಮೃತಾ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕಿ ಪೂರ್ಣಿಮಾ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಕಪಿಲಾ ಮಕ್ಕಳ ರಕ್ಷಣಾ ಘಟಕ,  ಆರೋಗ್ಯ  ಇಲಾಖೆ,  ಪುರಸಭೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2